20 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ:ಶಾಸಕ ಡಿ.ರವಿಶಂಕರ್

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್ :-20.ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ:ಶಾಸಕ ಡಿ.ರವಿಶಂಕರ್

ಕೆ.ಆರ್.ನಗರ: ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರಿ ನೌಕರರ ಕರ್ತವ್ಯ. ಅದನ್ನು ಎಲ್ಲಾ ನೌಕರರು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ‌ 20 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಹಾಗೂ‌ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೆತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರ್ಕಾರ ತ್ರಿ ಚಕ್ರ ವಾಹನ ನೀಡುತ್ತಿದೆ ಇದರ ಸದುಪಯೋಗ ಪಡೆದು ಕೊಂಡು ಉತ್ತಮವಾಗಿ ಬದುಕು ಸಾಗಿಸಿ ಎಂದರು.

ಡಿ.ದೇವರಾಜು ಅರಸು ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ಒಟ್ಟು ೩೦ ಮಂದಿ ಫಲಾನುಭವಿಗಳು ಉಚಿತ ಹೊಲಿಗೆ ಯಂತ್ರ ವಿತರಣೆಗೆ ಆಯ್ಕೆಯಾಗಿದ್ದು, ಇಂದು ಕೇವಲ ನಾಲ್ಕು ಮಂದಿಗೆ ಸಾಂಕೇತಿಕವಾಗಿ ನೀಡಲಾಗಿದ್ದು, ಉಳಿದವರಿಗೆ ಇಲಾಖೆಯ ಅಧಿಕಾರಿಗಳು ವಿತರಣೆ ಮಾಡುತ್ತಾರೆ. ಫಲಾನುಭವಿಗಳು ಸರ್ಕಾರದ ಸವಲತ್ತುಗಳನ್ನು ಅನ್ಯರಿಗೆ ನೀಡದೆ ಸದುಪಯೋಗ ಪಡಿಸಿಕೊಂಡು ಯೋಜನೆಗಳ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ತಾಲೂಕು ವಕ್ತಾರ ಸೈಯದ್‌ಜಾಬೀರ್, ತಾ.ಪಂ. ಇಒಗಳಾದ ವಿ.ಪಿ.ಕುಲದೀಪ್, ಎ.ಎನ್.ರವಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಬಿ.ನಟರಾಜು, ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಎನ್.ರಂಗಸ್ವಾಮಿ, ವಿಕಲಚೇತನರು ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ತಾಲೂಕು ಸಂಯೋಜಕ ಕೆ.ಎಲ್.ಹೇಮಂತ್‌ಕುಮಾರ್, ತಾ.ಪಂ. ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಕಾಂಗ್ರೆಸ್ ಮುಖಂಡರಾದ ಹುಚ್ಚೇಗೌಡ, ವಿ.ಸುರೇಶ್, ಎನ್.ಎಂ.ಶಂಕರಪ್ಪ, ತಿಮ್ಮಶೆಟ್ಟಿ ಹಾಜರಿದ್ದರು.

Share This Article
Leave a Comment