ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಬೋಧನೆ ಅತ್ಯಗತ್ಯ.; ಯುಕೇಶ್ ಕುಮಾರ್

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಬೋಧನೆ ಅತ್ಯಗತ್ಯ.; ಯುಕೇಶ್ ಕುಮಾರ್

ಮೈಸೂರು,ಫೆ.19 (ಕರ್ನಾಟಕ ವಾರ್ತೆ):-
ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಬೋಧನೆ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ತಿಳಿಸಿದರು.
ಅವರು ಇಂದು ಡಿ.ದೇವರಾಜ ಅರಸು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಮೈಸೂರು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಫಲಿತಾಂಶ ಸುಧಾರಣೆ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕರು ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ, ವೈಯಕ್ತಿಕ ಗಮನ ನೀಡುವ ಮೂಲಕ ಫಲಿತಾಂಶವನ್ನು ಸುಧಾರಿಸಬೇಕು” ಎಂದು ತಿಳಿಸಿದರು

ದುರ್ಬಲ ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿಗಳು, ಮರುಪಠಣ, ಪರೀಕ್ಷಾ ಪೂರ್ವ ತಯಾರಿ ಶಿಬಿರಗಳನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚನೆ ನೀಡಿದರು.ಪಿಯುಸಿ ಪರೀಕ್ಷೇಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಮಹತ್ವದ ಮಾಹಿತಿ ನೀಡಿದರು.

ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಒಂದು ಮತ್ತು ಎರಡು ವಿಷಯದಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಮೇಲೆ ವಿಶೇಷ ಕಾಳಜಿ ವಹಿಸಿ ಅವರನ್ನು ಕಡ್ಡಾಯವಾಗಿ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಸಫಲತೆ ಕಾಣುವಲ್ಲಿ ಶ್ರಮವಹಿಸಬೇಕೆಂದು ಹೇಳಿದರು.

ಹಿಂದಿನ ವರ್ಷದ ಪರೀಕ್ಷಾ ಫಲಿತಾಂಶಗಳ ವಿಶ್ಲೇಷಣೆ ನಡೆಸಿ, ವಿಷಯವಾರು ಕೊರತೆಗಳನ್ನು ಗುರುತಿಸುವುದು ಅಗತ್ಯವಿದೆ ಎಂದ ಅವರು, ಪ್ರತಿಯೊಂದು ಕಾಲೇಜು ತನ್ನದೇ ಆದ ಕ್ರಿಯಾಯೋಜನೆಯನ್ನು ರೂಪಿಸಿಕೊಂಡು ಕಾರ್ಯಗತಗೊಳಿಸಬೇಕೆಂದು ತಿಳಿಸಿದರು. ಶಿಕ್ಷಕರ ಹಾಜರಾತಿ, ಪಾಠ ಬೋಧನಾ ವಿಧಾನ, ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕರಾದ ಎಂ.ಪಿ ನಾಗಮ್ಮ ಅವರು ಪದವಿ ಪೂರ್ವ ಕಾಲೇಜುಗಳಲ್ಲಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

Share This Article
Leave a Comment