ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ: ಎಸ್.ಅರುಣ್ ಕುಮಾರ್

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ: ಎಸ್.ಅರುಣ್ ಕುಮಾರ್

ಮೈಸೂರು, ಮಾ.09(ಕರ್ನಾಟಕ ವಾರ್ತೆ):-
ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಸ್.ಅರುಣ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ತಾಲ್ಲೂಕು ಪಂಚಾಯತ್ ವತಿಯಿಂದ ಇಲವಾಲ ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ. ಕುಟುಂಬ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಭಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಬಿ.ಸವಿತಾ ಅವರು ಮಾತನಾಡಿ, ಮಹಿಳೆಯರು ತಮ್ಮ ಸಾಮಾರ್ಥ್ಯದಿಂದ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಹಿಸುತ್ತಿದ್ದಾರೆ. ಯಾವುದೇ ಹಿಂಜರಿಕೆಗೆ ಒಳಗಾಗಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ಅವರು ಮಾತನಾಡಿ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅನೇಕರು ಸ್ವಾವಲಂಭಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಜೀವನ ಸುಧಾರಣೆ ಕಂಡಿದೆ. ಪ್ರತಿಯೊಂದು ಕುಟುಂಬವು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರು ಮಾತನಾಡಿ, ಪ್ರಕೃತಿ ಸ್ವರೂಪಿಯಾದ ಮಹಿಳೆಯರು ಉತ್ತಮ ಸಮಾಜ ನಿರ್ಮಾಣ ಮಾಡುದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ನಮ್ಮ ಗ್ರಾಮೀಣ ಭಾಗದ ಮಹಿಳೆಯರು ಕೀಳಿರಿಮೆ ಬೆಳೆಸಿಕೊಳ್ಳದೆ ಆತ್ಮವಿಶ್ವಾಸದಿಂದ ಬದುಕಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಬಿ.ಕರೀಗೌಡ, ಬಸವಣ್ಣ, ತಾಲ್ಲೂಕು ಸಮಿತಿಯ ಸದಸ್ಯರಾದ ಚನ್ನಪ್ಪ, ಕರೀಗೌಡ, ರಾಣಿ, ನವೀನ್, ಗ್ರಾಮಾಂತರ ಸಿಡಿಪಿಒ ತಿಮ್ಮಯ್ಯ, ಆಹಾರ ಶಿರಸ್ತೆದಾರ್ ಮಹೇಶ್ ಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಣಿ, ಆಹಾರ ನಿರೀಕ್ಷಕರಾದ ನಂದಿನಿ, ಇಲವಾಲ ಗ್ರಾ.ಪಂ. ಪಿಡಿಒ ಹೇಮಂತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

ಗ್ಯಾರಂಟಿ ಯೋಜನೆ ಫಲಾನುಭವಿ ಅಭಿಪ್ರಾಯ

ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಹಸು ಖರೀದಿಸಿದ್ದೇನೆ. ಇದರಿಣಂದ ನಮ್ಮ ಕುಟುಂಬ ನಿರ್ವಹಣೆ ಸುಧಾರಿಸಿದೆ. ಭೂರಹಿತರಾದ ನಮಗೆ ಅನ್ನಭಾಗ್ಯದಿಂದ ಹೊಟ್ಟೆತುಂಬ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯವಾಗುತ್ತಿದೆ‌. ಗ್ಯಾರಂಟಿ ಯೋಜನೆಯಿಂದ ನಮಗೆ ಹೆಚ್ಚಿನ ನುಕೂಲವಾಗಿದೆ.

-ರತ್ಮಮ್ಮ
ಆನಂದೂರು ಗ್ರಾಮ, ಇಲವಾಲ ಹೋಬಳಿ,
ಮೈಸೂರು ತಾಲ್ಲೂಕು.

Share This Article
Leave a Comment