ಶಿಶು ಮರಣವನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ. ಶಿಶು ಮರಣದರ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – ಜಿ ಲಕ್ಷ್ಮೀಕಾಂತ ರೆಡ್ಡಿ

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಶಿಶು ಮರಣವನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ. ಶಿಶು ಮರಣದರ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ಏಪ್ರಿಲ್ 10 (ಕರ್ನಾಟಕ ವಾರ್ತೆ)ಚೆಲುವಾಂಬ ಆಸ್ಪತ್ರೆಯಲ್ಲಿ ಆಗುತ್ತಿರುವ ಶಿಶು ಮರಣವನ್ನು ಅದಷ್ಟು ಕಡಿಮೆ ಮಾಡಬೇಕು. ಶಿಶು ಮರಣವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕಾನ್ಸಿಲ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಚೆಲುವಾಂಬ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಶಿಶು ಮರಣಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಶು ಮರಣವನ್ನು ಮಾಸಿಕ ಶೂನ್ಯಕ್ಕೆ ಇಳಿಸಲು ಆಸ್ಪತ್ರೆಯ ವೈದ್ಯರು ಹಾಗೂ ಶುಶ್ರೂಷಕರು ಎಲ್ಲಾ ಕ್ರಮಗಳನ್ನು ಕೈಗೊಳ್ಳಿ. ಆಗಸ್ಟ್ ನಲ್ಲಿ 9, ಡಿಸೆಂಬರ್ ನಲ್ಲಿ 8 ಹಾಗೂ ಮಾರ್ಚ್ ನಲ್ಲಿ 9 ಶಿಶು ಮರಣಗಳು ಆಗಿವೆ ಇದು ಬೇರೆ ಮಾಸಿಕಗಳಿಗೆ ಹೋಲಿಸಿದರೆ ಕಡಿಮೆ ಇದೆ. ಇದೇ ರೀತಿ ಶಿಶು ಮರಣವನ್ನು ಒಂದು ಅಂಕಿಗೆ ಇಳಿಸಿ ಶೂನ್ಯದತ್ತ ಕೊಂಡೊಯ್ಯಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು.

ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಆಗದ ಕ್ರಿಟಿಕಲ್ ಪ್ರಕರಣಗಳನ್ನು ಎರಡು ಮೂರು ದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಟ್ಟುಕೊಂಡು ಕಳುಹಿಸದೆ ಅದಷ್ಟು ಬೇಗ ಶಿಪಾರಸ್ಸು ಮಾಡಿ ಕಳುಹಿಸಬೇಕು. ಇದರಿಂದ ಉತ್ತಮ ಚಿಕಿತ್ಸೆ ನೀಡಿ ಶಿಶು ಮರಣವನ್ನು ತಡೆಯಬಹುದಾಗಿದೆ. ಆಸ್ಪತ್ರೆಗೆ ದಾಖಲಾದ 48 ಗಂಟೆಗಳ ಒಳಗೆ ಜನವರಿಯಿಂದ ಮಾರ್ಚ್ ವರೆಗೆ 23 ಶಿಶು ಮರಣ ಆಗಿವೆ ಈ 23 ಪ್ರಕರಣಗಳನ್ನು ಅಧ್ಯಯನ ಮಾಡಿ ಕೆಳ ಹಂತದ ಆಸ್ಪತ್ರೆಗಳ ಲೋಪ ಏನು ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸುವಲ್ಲಿ ವಿಳಂಬ ಮಾಡಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.

ಮೈಸೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ದ್ರಾಕ್ಷಾಯಣಿ ಅವರು ಮಾತನಾಡಿ ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶು ವೈದ್ಯರು 6 ಸಂಖ್ಯೆ ಬೇಕಿದ್ದು 5 ಹುದ್ದೆಗಳು ಖಾಲಿ ಇವೆ. ಶುಶ್ರೂಷಕರು 96 ಹುದ್ದೆಗಳು ಇದ್ದು, 59 ಕರ್ತವ್ಯ ನಿರ್ವಹಿಸುತ್ತಿದ್ದಾರೆ 40 ಹುದ್ದೆಗಳು ಖಾಲಿ ಇವೆ. ಗ್ರೂಪ್ ಡಿ 16 ಹುದ್ದೆಗಳು ಇದ್ದು 12 ಹುದ್ದೆಗಳು ಖಾಲಿ ಇವೆ. ಚೆಲುವಾಂಬ ಆಸ್ಪತ್ರೆಯಲ್ಲಿ ಹುದ್ದೆಗಳ ಕೊರತೆ ಇದೆ. ಜನವರಿಯಲ್ಲಿ 15, ಫೆಬ್ರವರಿಯಲ್ಲಿ 18 ಮಾರ್ಚ ನಲ್ಲಿ 09 ಶಿಶು ಮರಣ ಸಂಭವಿಸಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್ ಅವರು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
Leave a Comment