ಪಬ್ಲಿಕ್ ಅಲರ್ಟ್
ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಜಂಟಿಯಾಗಿ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಇಂದು ಬಾನು ಮುಷ್ತಾಕ್ ಬದುಕು ಬರಹ ಕುರಿತ ಚರ್ಚೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಖ್ಯಾತ ಬರಹಗಾರ ವಸುಧೇಂದ್ರ ಅವರು ಪುಸ್ತಕ ಖರೀದಿಸುವ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅಂಶಿ ಪ್ರಸನ್ನ ಕುಮಾರ್ ಭಾಗವಹಿಸಿದ್ದರು. ಕೃತಿಯನ್ನು ಕುರಿತು ಪ್ರೀತಿ ನಾಗರಾಜ್, ಶ್ರೀಮತಿ ಮಂಜುಳಾ ಕಿರುಗಾವಲು ಹಾಗೂ ಡಾ. ಸಿದ್ದರಾಮ ಹೊನ್ಕಲ್ ಮಾತನಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೃತಿಯ ಲೇಖಕ ಬಿ ಶಿವಾನಂದವರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್, ಮಾರಾಟ ಮೇಳದ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಡಾ.ನಂಜಯ್ಯ ಹೊಂಗನೂರು ಉಪಸ್ಥಿತರಿದ್ದರು. ರವೀಂದ್ರನಾಥ ಸಿರಿವರ ಕಾರ್ಯಕ್ರಮ ನಿರೂಪಿಸಿದರು.
