ವಿಷ್ಣುಗೆ ಕರ್ನಾಟಕ ರತ್ನ ಮೈಸೂರು ಸಂಭ್ರಮ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಸಾಹಸಸಿಂಹ ವಿಷ್ಣುವರ್ಧನ್ ರವರಿಗೆ “ಕರ್ನಾಟಕ ರತ್ನ ಪ್ರಶಸ್ತಿ” ಘೋಷಣೆ ಹಿನ್ನೆಲೆಯಲ್ಲಿ ಅಗ್ರಹಾರ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಸಾಹಸಸಿಂಹ ವಿಷ್ಣುವರ್ಧನ್ ಗೆ ಘೋಷಣೆ ಕೂಗಿ ಸಿಹಿ ಹಂಚಿ ಅಭಿಮಾನಿಗಳು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ  ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮಾತನಾಡಿ, ಕರ್ಣನಿಗೆ ಕೊನೆಗೂ ಕಾಲ ಕೂಡಿಬಂತು 15 ವರ್ಷದ ಅಭಿಮಾನಿಗಳ ಕನಸು ಇಂದು ನನಸಾಯಿತು. ಸರ್ಕಾರಕ್ಕೆ ವಿಶೇಷ ಅಭಿನಂದನೆಗಳು ಈ ಬಾರಿ ವಿಷ್ಣು ವರ್ಧನ್ ಅವರ 75ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಹಬ್ಬದಂತೆ ಆಚರಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅಭಿನವ ಸರಸ್ವತಿ ಬಿ.ಸರೋಜಾದೇವಿ ಅವರಿಗೂ ಕರ್ನಾಟಕ ರತ್ನ ನೀಡಿರುವುದು ಸ್ವಾಗತಿಸುತ್ತೇವೆಂದರು.
ಇದೇ ಸಂದರ್ಭದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಜಿ.ರಾಘವೇಂದ್ರ, ಬಸವರಾಜ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರವಿಚಂದ್ರ, ಎಸ್.ಎನ್.ರಾಜೇಶ್, ಟಿ.ಎಸ್.ಅರುಣ್, ರವಿನಂದನ್, ಮಹಾನ್ ಶ್ರೇಯಸ್, ಲಕ್ಷ್ಮಣ್, ಚಿನ್ನ ಬೆಳ್ಳಿ ಸಿದ್ದಪ್ಪ, ಸಂತೋಷ್, ರವೀಂದ್ರ ಕುಮಾರ್, ಅಭಿ, ಹರೀಶ್ ನಾಯ್ಡು, ರಾಕೇಶ್ ಭಟ್ ಇನ್ನಿತರರು ಹಾಜರಿದ್ದರು.

Share This Article
Leave a Comment