ಪಬ್ಲಿಕ್ ಅಲರ್ಟ್ ನ್ಯೂಸ್:-ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ
ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿತು ಮೈಸೂರು ಅರಮನೆ!
ಮೈಸೂರು ಆ.30(ಕರ್ನಾಟಕ ವಾರ್ತೆ): ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇಂದು ಆ.30 ಮೂರು ವರ್ಷಗಳನ್ನು ಪೂರೈಸಿದೆ.
ಈ ಸಂಭ್ರಮದ ಸವಿನೆನಪಿಗಾಗಿ ಮೈಸೂರು ಅರಮನೆ ಗುಲಾಬಿ ಬಣ್ಣ (ಪಿಂಕ್ ಲೈಟ್) ಬೆಳಕಿನಲ್ಲಿ ಕಂಗೊಳಿಸಿ ಪ್ರವಾಸಿಗರ ಕಣ್ಮನ ಸೆಳೆಯಿತು.
ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷ ಪೂರೈಸಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ(PINK) ಬಣ್ಣದ ಬೆಳಕಿನ ವ್ಯವಸ್ಥೆ ಮಾಡಲಾಗಿತ್ತು.
ಇದುವರೆಗೂ ಸದರಿ ಯೋಜನೆ ಅಡಿ 1.20 ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ.
