ದೀಪಾವಳಿಗೆ ಕೆಎಸ್‌ ಆರ್‌ಟಿಸಿ ೨೫೦೦ ಹೆಚ್ಚುವರಿ ಸಾರಿಗೆ

Chethan
1 Min Read

ಪಬ್ಲಿಕ್ ಅಲರ್ಟ್


ಬೆಂಗಳೂರು,ಅ.೧೪- ಮುಂಬರುವ ಅ.೨೦ರ ನರಕ ಚತುರ್ದಶಿ ಹಾಗೂ ೨೨ರ ಬಲಿಪಾಡ್ಯಮಿಯ ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸಾರ್ವಜನಿಕರ ಅನೂಕೂಲಕ್ಕಾಗಿ ಹೆಚ್ಚುವರಿಯಾಗಿ ರಾಜ್ಯದ ವಿವಿಧ ಭಾಗಗಳಿಗೆ ೨೫೦೦ ಬಸ್‌ಗಳನ್ನು ಬಿಡುಗಡೆ ಮಾಡಿದೆ. ಮಾತ್ರವಲ್ಲದೆ, ರಾಜ್ಯದಿಂದ ವಿವಿಧ ಅಂತರಾಜ್ಯಗಳಿಗೂ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಿದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ ಸೈಟ್‌ www.ksrtc.karnataka.gov.in ಸಂಪರ್ಕಿಸಲು ಕೋರಿದೆ.

Share This Article
Leave a Comment