ಸೆ.೧೦ಕ್ಕೆ ಒಕ್ಕಲಿಗರ ಸಂಘದಿಂದ ತ್ರಿರತ್ನ ಜಯಂತ್ಯೋತ್ಸವ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಇಲ್ಲಿನ ಮಾನಸಿನಗರದ ಕೆಎಸ್ಆರ್‌ಟಿಸಿ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜಗನ್ಮೋಹನ ಅರಮನೆಯಲ್ಲಿ ಸೆ.10ರಂದು ಮಧ್ಯಾಹ್ನ 3ಕ್ಕೆ ನಾಡಪ್ರಭು ಕೆಂಪೇಗೌಡ, ರಾಷ್ಟ್ರಕವಿ ಕುವೆಂಪು ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯ ತ್ರಿರತ್ನ ಜಯಂತ್ಯೋತ್ಸವ ಆಯೋಜಿಸಲಾಗಿದೆ ಎಂದು ಸಂಘದ ಸಂಚಾಲಕ ಸಿ.ಡಿ.ವಿಶ್ವನಾಥ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಶಾಸಕ ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಸುಮಾರು 30 ಮಂದಿ ನಿವೃತ್ತರಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗೌರವಿಸುವರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೆಂಪೇಗೌಡ ಕ್ರಿಕೆಟ್ ಕಪ್ ಪ್ರಶಸ್ತಿ ಪ್ರದಾನ ಮಾಡುವರು. ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಪ್ರಧಾನ ಭಾಷಣ ಮಾಡುವರು. ಸಚಿವ ಕೆ.ವೆಂಕಟೇಶ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಮಾಜಿ ಉಪಾಧ್ಯಕ್ಷ ಶಿವಲಿಂಗಯ್ಯ, ಸಹಕಾರ್ಯದರ್ಶಿ ಎಂ.ದೇವರಾಜ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಸಿ.ಮಾದೇಶ್, ಎ.ಆರ್.ಶಮಂತ್‌ಕುಮಾರ್, ನಾಗರಾಜ್ ಇದ್ದರು.

Share This Article
Leave a Comment