’ಕನ್ನಡಿಗರಿಗೆ ಉದ್ಯೋಗ ನೀಡದ ಕಾರ್ಖಾನೆ ಬಂದ್’

Pratheek
2 Min Read

ಪಬ್ಲಿಕ್ ಅಲರ್ಟ್


ಮೈಸೂರು : ಖಾಸಗಿ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡದಿದ್ದರೆ ಅಂತಹ ಕಾರ್ಖಾನೆಗಳನ್ನು ಬಂದ್ ಮಾಡಿಸಲಾಗುವುದು ಎಂಬ ಧ್ಯೇಯದೊಂದಿಗೆ ಹೋರಾಟ ಮತ್ತು ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥ ನಡೆಸುತ್ತಿರುವ ಕನ್ನಡಾಂಬೆ ರಕ್ಷಣಾ ವೇದಿಕೆಗೆ ನಮ್ಮ ಬೆಂಬಲವಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕನ್ನಡ ನಾಮಫಲಕ ಅಳವಡಿಕೆ, ಕನ್ನಡಿಗರಿಗೆ ಉದ್ಯೋಗ ನೀಡುವುದು, ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಲು, ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಏರ್ಪಡಿಸಿದ್ದ ಕಾಲ್ನಡಿಗೆ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಮಿಕರ ಎಲ್ಲ ರೀತಿಯ ಹಿತರಕ್ಷಣೆ, ಪರಿಸರ ರಕ್ಷಣೆ, ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡುವುದು, ಕನ್ನಡದಲ್ಲಿ ವ್ಯವಹರಿಸುವುದು, ಕಾರ್ಮಿಕರ ಸುರಕ್ಷತೆ ಮತ್ತು ಅವರ ಉದ್ಯೋಗ ಭದ್ರತೆ ಬಗ್ಗೆ ಇಂದು ಯಾವ ಸಂಘಟನೆಗಳೂ ಮತ್ತು ಸರ್ಕಾರಗಳು ಮಾತನಾಡುತ್ತಿಲ್ಲ. ಅಲ್ಲದೇ ಕಾರ್ಮಿಕರ ಪರವಾಗಿ ಹೋರಾಟ ಮಾಡಲು ಯಾವುದೇ ಸಂಘಟನೆಗಳು ಮುಂದೆ ಬರುವುದಿಲ್ಲ, ಅಂತಹದರಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜಶೇಖರ್ ಅವರು ಕಾರ್ಮಿಕರ ಪರವಾಗಿ ದನಿ ಎತ್ತಿದ್ದಾರೆ. ಅವರ ದನಿಯನ್ನು ದುರ್ಬಲಗೊಳಿಸುವ ಶಕ್ತಿಗಳೂ ಸಹ ಒಂದು ಕಡೆ ಕೆಲಸ ಮಾಡುತ್ತಿವೆ. ಇಂತಹದರಲ್ಲಿ ಕಾರ್ಮಿಕರು ಕನ್ನಡಾಂಬೆ ರಕ್ಷಣಾ ವೇದಿಕೆಗೆ ಬೆಂಬಲ ನೀಡಿ, ಜಾಥಾದಲ್ಲಿ ಪಾಲ್ಗೊಂಡು ನಿಮ್ಮ ಹಕ್ಕನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಬಿ.ಬಿ.ರಾಜಶೇಖರ್ ಮಾತನಾಡಿ, ಕನ್ನಡ ನೆಲ, ಜಲ ಮತ್ತಿತರ ಸೌಲಭ್ಯಗಳನ್ನು ಬಳಸಿಕೊಂಡಿರುವ ಕಾರ್ಖಾನೆಗಳು ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ, ಕಾರ್ಖಾನೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುತ್ತಿಲ್ಲ, ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡುತ್ತಿಲ್ಲ, ಇದರ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ಇಂದಿನಿಂದ ನಾಲ್ಕುದಿನಗಳ ಕಾಲ ಹೂಟಗಳ್ಳಿ, ಕೂರ್ಗಳ್ಳಿ, ಹೆಬ್ಬಾಳ್ ಮತ್ತು ಮೇಟಗಳಲ್ಲಿ ಕ್ಥಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥ ಹಮ್ಮಿಕೊಂಡಿದೆ. ಕರ ಪತ್ರಗಳ ಮೂಲಕ ಜಾಗೃತಿಯನ್ನೂ ಮೂಡಿಸುತ್ತಿದೆ. ಇನ್ನು ಮುಂದೆ ಕೈಗಾರಿಕೆಗಳು ಎಚ್ಚೆತ್ತುಕೊಂಡು ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಬಳಕೆ ಮಾಡಬೇಕು, ಕಾರ್ಮಿಕರ ತಾರತಮ್ಯ ಅಳಿಸಬೇಕು, ಮೂಲಭೂಲ ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕಾರ್ಮಿಕ ಇಲಾಖೆಗೆ ದೂರು ನೀಡಿ ಕಾರ್ಖಾನೆ ಬಂದ್ ಮಾಡಿಸುವ ತನಕವೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಳಗ್ಗೆ ೧೦ ಗಂಟೆಗೆ ಪ್ರಾರಂಭವಾದ ಜಾಥ ಸಂಜೆಯವರೆಗೂ ನಡೆಯಿತು. ಜಾಥಕ್ಕೆ ಚಾಲನೆ ನೀಡಿದ ಜಿಟಿಡಿ ತಾವೂ ಕೂಡ ಕಾಲ್ನಡಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ಡಿಪಿಕೆ ಪರಮೇಶ್, ರಾಜ್ಯ ಖಜಾಂಚಿ ನಂಜುಂಡ, ಮೈಸೂರು ಜಿಲ್ಲಾ ಅಧ್ಯಕ್ಷ ಸಂತೋಷ್, ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷರಾದ ಮಂಜುಳ, ಪದಾಧಿಕಾರಿಗಳಾದ ಸಿಂಧುವಳ್ಳಿ ಶಿವಕುಮಾರ್, ಮನುಗೌಡ,  ಸೋಮಶೇಖರ, ಗೌತಮ್, ಅನುರಾಜ್ ಗೌಡ, ಮಂಜುನಾಥ್, ಸಿದ್ದೇಗೌಡ ಮುಂತಾದವರು ಕಿಕ್ಕೇರಿ ಕಿರಣ, ಶಿವಕುಮಾರ್, ಹೊನ್ನೇಗೌಡ, ರವಿಗೌಡ, ನಾಗರಾಜು, ರಾಜೇಗೌಡ, ಮಹದೇವಸ್ವಾಮಿ ಮತ್ತಿತರರು ಇದ್ದರು.

Share This Article
Leave a Comment