ಮೊಬೈಲ್‌ ಸಂಸ್ಕೃತಿ ದೂರ ಮಾಡುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡಿ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ, ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನು ತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬರುತ್ತಿದೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ.ಅಂತಹವರನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳ ಸೌಲಭ್ಯ ಒದಗಿಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಓದುವ ಮಕ್ಕಳಲ್ಲಿ ಮೊಬೈಲ್ ಬಳಸದಂತೆಹಾಗೂ ಮೊಬೈಲ್ ಸಂಸ್ಕೃತಿಯನ್ನು ದೂರವಿರಿಸಿ ಶಿಕ್ಷಣದ ಕಡೆಗೆ ಗಮನಹರಿಸುವಂತೆ ಮಾಡಬೇಕು ಎಂದರು.
ಇಂದು ಇರುವ ಜಮೀನುಗಳನ್ನು ಮಾರಾಟ ಮಾಡಿ ಮದುವೆ ಮಾಡುವುದು ಹೆಚ್ಚಾಗುತ್ತಿದೆ. ಶಿಕ್ಷಕರು ಸರಳ ವಿವಾಹದ ಬಗ್ಗೆ ಅರಿವು ಮೂಡಿಸಬೇಕು. ಸಮಾಜವನ್ನು ಬದಲಿಸುವ ಕೆಲಸ ಮಾಡಬೇಕು. ನಾನೇನನ್ನ ಮಗ,ಇಬ್ಬರು ಹೆಣ್ಣು ಮಕ್ಕಳಿಗೆ ತಿರುಪತಿಯಲ್ಲಿ, ತಮ್ಮನ ಮಗನ ಮದುವೆಯನ್ನು ಧರ್ಮಸ್ಥಳದಲ್ಲಿ ಮದುವೆ ಮಾಡಿದ್ದೇನೆ. ಹಾಗಾಗಿ, ಹೆಣ್ಣು ಮಕ್ಕಳಿಗೆ ಸರಳ ವಿವಾಹ ಮಾಡಿ ಅವರ ಹೆಸರಿನಲ್ಲಿ ಜಮೀನು ಬರೆದುಕೊಡಬೇಕು ಎಂದು ನುಡಿದರು. ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮತ್ತಿತರರು ಹಾಜರಿದ್ದರು.

TAGGED:
Share This Article
Leave a Comment