ಮಾವುತ, ಕಾವಾಡಿಗರಿಗೆ ಅತಿಥ್ಯ ನೀಡಿದ ಸಚಿವ ಮಹದೇವಪ್ಪ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ದಸರಾ ಅಂಗವಾಗಿ ಅರಮನೆ ಆವರಣಕ್ಕೆ ಆಗಮಿಸಿರುವ ಮಾವುತರು, ಕಾವಾಡಿಗರ ಕುಟುಂಬಗಳಿಗೆ ಜಿಲ್ಲಾಡಳಿತದವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ಅತಿಥ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಹಾರ ಬಡಿಸಿದರು.
ಇದೇ ವೇಳೆ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೆಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಡಾ.ಪುಷ್ಪಾ ಅಮರ್ ನಾಥ್, ದಸರಾ ವಸ್ತುಪ್ರದರ್ಶನ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ ಬಿಂದುಮಣಿ, ಸುಂದರ್ ರಾಜ್ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment