ಇಂದು ನಾಳೆ ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ(ನಾಳೆ) ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ “ಬೃಹತ್‌ ಉದ್ಯೋಗ ಮೇಳ” ಆಯೋಜಿಸಿದೆ.
ಮೈಸೂರಿನ ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ಪಡೆದುಕೊಂಡಿರುವ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಡಾ. ಶರಣಪ್ರಕಾಶ್ ಆರ್‌ ಪಾಟೀಲ್, ಆಕಾಂಕ್ಷಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.
ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ. ಸುಮಾರು 45000 ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.
ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.
ನೋಂದಣಿ ಮಾಡಿಕೊಳ್ಳಿ: ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿಯೂ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Share This Article
Leave a Comment