ಕ್ರೀಡೆ ಎಂಬುದು ಆರೋಗ್ಯ ಹೆಚ್ಚಿಸುವ ಶ್ರೇಷ್ಠವಾದ ಕ್ಷೇತ್ರ- ಸಿ. ಎನ್

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಕ್ರೀಡೆ ಎಂಬುದು ಆರೋಗ್ಯ ಹೆಚ್ಚಿಸುವ ಶ್ರೇಷ್ಠವಾದ ಕ್ಷೇತ್ರ- ಸಿ. ಎನ್ ಮಂಜೇಗೌಡ

ಮೈಸೂರು,ಜ.8 (ಕರ್ನಾಟಕ ವಾರ್ತೆ):-
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಶರೀರದ ಶಕ್ತಿ ಹೆಚ್ಚಾಗುತ್ತದೆ. ಎಲ್ಲಾ ಅಂಗಗಳಿಗೂ ಆಮ್ಲಜನಕ ಸಿಗುವುದರ ಜೊತೆಗೆ ಆರೋಗ್ಯವು ಉತ್ತಮವಾಗಿ ಇರುತ್ತದೆ. ಕ್ರೀಡೆ ಎಂಬುದು ಶ್ರೇಷ್ಠವಾದ ಕ್ಷೇತ್ರವಾಗಿದೆ ಎಂದು ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್ ಮಂಜೇಗೌಡ ಅವರು ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆ ಹಾಗೂ ಶಿಕ್ಷಣದಲ್ಲಿ ಯಾವುದೇ ಜಾತಿ ವ್ಯವಸ್ಥೆಗೆ ಅವಕಾಶವಿರುವುದಿಲ್ಲ. ಕ್ರೀಡೆಗೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಬೇಕು. ಸಾರ್ವಜನಿಕರ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಡುವುದರ ಜೊತೆಗೆ ನಿಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಅವರು ಮಾತನಾಡಿ ಅಧಿಕಾರಿಗಳು ಕಾರ್ಯ ಕ್ಷಮತೆಯನ್ನು ಹೆಚ್ಚಿಸುವ ಸಲುವಾಗಿ ಸರ್ಕಾರಿ ನೌಕರರ ಕ್ರೀಡೆಯನ್ನು ಆಯೋಜಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು. ಪ್ರತಿದಿನ ಅಧಿಕಾರಿಗಳು ಯಾವುದಾರರು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಗಡಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿ ಕೊಳ್ಳುವುದರಿಂದ ದೇಹದ ಎಲ್ಲ ಅಂಗಗಳಿಗೆ ಅ ಆರೋಗ್ಯ ದೊರೆಯುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗ,ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರು ಮಾತನಾಡಿ, ಪ್ರತಿಯೊಬ್ಬ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡರೆ ಮನಸ್ಸಿಗೂ ದೇಹಕ್ಕೂ ನೆಮ್ಮದಿ ದೊರೆಯುತ್ತದೆ. ನೌಕರರು ಅನುಭವಿಸುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಅಧಿಕಾರಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿ ಕೊಂಡಾಗ ಮಾನಸಿಕ ಸ್ಥಿತಿಯೂ ದೈಹಿಕ ಆರೋಗ್ಯವೂ ಉತ್ತಮವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಡಾ.ಅರುಣಕುಮಾರ ಸಿ. ಬಿ., ಅವರು ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಜೆ. ಗೋವಿಂದರಾಜು, ರಾಜ್ಯ ಕಾರ್ಯದರ್ಶಿಗಳಾದ ಗಣೇಶ್ ಎಂ. ಕೆ, ರಾಜ್ಯ ಪರಿಷತ್ ನ ಸದಸ್ಯರು ಹಾಗೂ ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಮಾಲೇಗೌಡ. ಡಿ, ವಿಭಾಗೀಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ರಾಜ್ಯ ಕಾರ್ಯದರ್ಶಿಗಳಾದ ಜಯಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮಹಾದೇವ, ರಾಜ್ಯ ಪರಿಷತ್ ನ ಸದಸ್ಯರಾದ ರಘು. ಎಸ್, ರೇವಣ್ಣ, ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment