ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಚಿವರ ಭಾಗಿ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಚಿವರ ಭಾಗಿ

ಬುದ್ಧ, ಬಸವಣ್ಣ, ಗಾಂಧೀಜಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಎಲ್ಲ ವರ್ಗಗಳ ಜನರನ್ನು ಸಮಾನವಾಗಿ ಕಾಣುವ ಈ ಮಠ ಮುಂದುವರೆಸಿಕೊಂಡು ಬಂದಿದೆ ಸಚಿವ.ಮುನಿಯಪ್ಪ

ಸುತ್ತೂರು ಮಠ ಸಮಾಜ ಸುಧಾರಣೆಯ ದಾರಿದೀಪ :- ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಶತಮಾನಗಳಿಂದ ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತಾ ಬಂದಿದ್ದು, ಇದು ಕೇವಲ ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗದೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರಾಗಿರುವ ಮಹತ್ವದ ಧಾರ್ಮಿಕ ಕೇಂದ್ರವಾಗಿದೆ ಎಂದರು.

ಸುತ್ತೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶ್ರೀ ಶಿವಶಿದ್ದೇಶ್ವರ ಮಹಾಸ್ವಾಮಿಗಳ ಪಾದಪದ್ಮಗಳಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸಿ, ಮಠದ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

ಬುದ್ಧ, ಬಸವಣ್ಣ, ಗಾಂಧೀಜಿ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಎಲ್ಲ ವರ್ಗಗಳ ಜನರನ್ನು ಸಮಾನವಾಗಿ ಕಾಣುವ ಪರಂಪರೆಯನ್ನು ಸುತ್ತೂರು ಮಠ ಮುಂದುವರೆಸಿಕೊಂಡು ಬಂದಿದೆ.

ಶಿಕ್ಷಣ, ಸಂಸ್ಕಾರ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಗಾಗಿ ಮಠ ಮಾಡುತ್ತಿರುವ ಸೇವೆ ಅನನ್ಯವಾಗಿದೆ ಎಂದರು.

ಮಠದ ಆಶ್ರಯದಲ್ಲಿ ನಡೆಯುತ್ತಿರುವ ವಿದ್ಯಾಸಂಸ್ಥೆಗಳು ಕೇವಲ ವಿದ್ಯಾಭ್ಯಾಸವಷ್ಟೇ ಅಲ್ಲದೆ ಜೀವನ ಮೌಲ್ಯಗಳನ್ನು ಕಲಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುತ್ತಿವೆ. ಎಲ್ಲ ಧರ್ಮ ಹಾಗೂ ವರ್ಗದ ಜನರಿಗೆ ಸಮಾನ ಅವಕಾಶ ನೀಡುವ ದೃಷ್ಟಿಕೋನ ಸುತ್ತೂರು ಮಠದ ವೈಶಿಷ್ಟ್ಯ ವಾಗಿದ್ದು

ಕಳೆದ ಎರಡು ದಶಕಗಳಿಂದ ಸುತ್ತೂರು ಮಠದ ಸಾಮಾಜಿಕ ಸೇವೆಗಳನ್ನು ಕಣ್ಣಾರೆ ಕಂಡಿದ್ದೇನೆ.

ಈ ಮಠ ಸಮಾಜ ಸುಧಾರಣೆಗೆ ದಾರಿದೀಪವಾಗಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಅಭಿವೃದ್ಧಿ ಹೊಂದಿ ಜನಸಾಮಾನ್ಯರಿಗೆ ಆಶೀರ್ವಾದವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ,ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು.

Share This Article
Leave a Comment