ಪತ್ರಿಕಾ ವಿತರಕರು ಸೈನಿಕರು: ನಾರಾಯಣಗೌಡ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಬಿಸಿಲು, ಮಳೆ, ಚಳಿ ಲೆಕ್ಕಿಸದೆ ಹಗಲು ರಾತ್ರಿ ವರ್ಷವಿಡಿ ಕೆಲಸ ನಿರ್ವಹಿಸುವ ಯೋಧರಂತೆ ಪತ್ರಿಕಾ ವಿತರಕರದು ಕೂಡ ತ್ಯಾಗದ ಕಾರ್ಯ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದರು.
ನಗರದ ಚಾಮುಂಡಿಪುರಂನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪತ್ರಿಕಾ ವಿತರಕರ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕರಾದ ಓಂದೇವೆ, ಜವರಪ್ಪ, ನಾಗೇಶ್, ಕಾವ್ಯ ಪ್ರಿಯ, ಎಂ.ಪಿ.ಗುಂಡಪ್ಪ, ಶ್ರೀಕಾಂತ್ ರವರನ್ನು ಸನ್ಮಾನಿಸಿ ಮಾತನಾಡಿದರು. ಮಾಜಿ ಪ್ರಧಾನಿ ಅಬ್ದುಲ್ ಕಲಾಮ್ ಸಹ ಪತ್ರಿಕಾ ವಿತರಕರಾಗಿ ಮೇಲ್ಮಟ್ಟಕ್ಕೆ ಬಂದವರಾಗಿದ್ದಾರೆ. ಪತ್ರಿಕಾ ವಿತರಕರನ್ನು ಕೀಳಾಗಿ ಕಾಣಬಾರದು, ಮಳೆಗಾಲದಲ್ಲಿ ತೊಂದರೆ ವಿತರಕರು ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಾರೆ. ವಾಹನಗಳಿಂದ ಪತ್ರಿಕೆಗಳ ಬಂಡಲ್ ಗಳನ್ನು ಇಳಿಸಿಕೊಳ್ಳಲು, ವಿತರಕರಿಗೆ ಹಾಗೂ ಪತ್ರಿಕೆ ಹಾಕುವ ಹುಡುಗರಿಗೆ ಹಂಚಲು ಕಷ್ಟವಾಗುತ್ತದೆ. ಆದ್ದರಿಂದ ಪತ್ರಿಕೆಗಳ ಹಂಚಿಕೆಗೆ ಮೈಸೂರು ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಜಾಗ ಮೈಸೂರು ನಗರ ಪಾಲಿಕೆ ಶಾಶ್ವತವಾಗಿ ಜಾಗ ಕಲ್ಪಿಸಿ ಕೊಡಬೇಕು ಎಂದರು. 
ಪತ್ರಿಕ ವಿತರಕರ ಸಂಘದ ಕಾರ್ಯದರ್ಶಿ ರವಿ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜಿ.ರಾಘವೇಂದ್ರ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಮೇಶ್ ರಾಮಪ್ಪ, ಎಸ್.ಎನ್.ರಾಜೇಶ್,  ಲೋಕೇಶ್, ದಿನೇಶ್ ಇನ್ನಿತರರು ಹಾಜರಿದ್ದರು.

Share This Article
Leave a Comment