ರಾಜವಂಶಸ್ಥರಿಗೆ ಜಿಲ್ಲಾಡಳಿತ ಆಹ್ವಾನ

Chethan
0 Min Read

ಪಬ್ಲಿಕ್ ಅಲರ್ಟ್

ಮೈಸೂರು: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ದಸರಾ ಉತ್ಸವಕ್ಕೆ ಅಧಿಕೃತವಾಗಿ ಜಿಲ್ಲಾಡಳಿತದ ಪರವಾಗಿ ಆಹ್ವಾನ ನೀಡಿದರು.

ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಇತರರು ಉಪಸ್ಥಿತರಿದ್ದರು

Share This Article
Leave a Comment