ಪಬ್ಲಿಕ್ ಅಲರ್ಟ್
ಬೆಂಗಳೂರು,ಸೆ.೯- ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಯಾದ ಗೋಲ್ಡನ್ ಬುಕ್ ಅಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಮರ್ಪಿಸಿದರು.
ಸಿಎಂ ಸದರಿ ವಿಷಯ ಆಲಿಸಿ ಸಂತೋಷ ವ್ಯಕ್ತಪಡಿಸಿ, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ. ಯೋಜನೆ ಜಾರಿಗೆ ಕಾರಣರಾದ ಇಲಾಖೆ ಸಚಿವ, ಅಧಿಕಾರಿಗಳು ಹಾಗೂ ಯಶಸ್ವಿಗೊಳಿಸಿದ ಸಿಬ್ಬಂದಿಗಳಿಗೆ ಅಭಿನಂದನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಪಂಚ ಗ್ಯಾರೆಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಇನ್ನಿತರರು ಉಪಸ್ಥಿತರಿದ್ದರು.
