ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

Share This Article
Leave a Comment