ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾ**

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾ*ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕೈಗೊಂಡ ಕ್ರಮಗಳ ಹೈಲೈಟ್ಸ್…

*ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.

*ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

*ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

*ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

*ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್.

“ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ ತೆಗೆದುಕೊಂಡ ಸಿಎಂ.

Share This Article
Leave a Comment