ಪಬ್ಲಿಕ್ ಅಲರ್ಟ್ ನ್ಯೂಸ್:-ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಕಡೆಯವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ: ಸಿಎಂ ಡಿ.ಕೆ. ಶಿವಕುಮಾರ್

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಕಡೆಯವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 22:

“ಬಿಡದಿ ಟೌನ್ ಶಿಪ್ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಪರವಾಗಿ ಜೆಡಿಎಸ್ ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಿಎಂ ಡಿ ಕೆ ಶಿವಕುಮಾರ್ ಅವರು ಬೈರಮಂಗಲಕ್ಕೆ ಚರ್ಚೆಗೆ ಬರಲಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರಲ್ಲಾ ಎಂದು ಕೇಳಿದಾಗ, “ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಹಿಂದೆಯೇ ಚರ್ಚೆಗೆ ಕರೆದಿದ್ದೆ. ಅದರೆ ಬರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ, ಇತರ ಅನುಭವಿ ರಾಜಕಾರಣಿಗಳ ಮೂಲಕ ಚರ್ಚೆ ಮಾಡಿಸಲಿ” ಎಂದರು.

ಕುಮಾರಸ್ವಾಮಿ ಅವರು ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರಿಗೆ ಶುಭವಾಗಲಿ (I wish him All the Best)” ಎಂದು ಪ್ರತಿಕ್ರಿಯಿಸಿದರು.

Share This Article
Leave a Comment