ಪಿಫಾ ವಿಶ್ವ ಕಪ್ ಅಂತಿಮ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಪಿಫಾ ವಿಶ್ವ ಕಪ್ ಅಂತಿಮ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು

ನಮಗೆ ನಿಮಗೆ ಭಾನುವಾರ, ರಜೆ ಎಂಬುದು ಇಲ್ಲ

ಬೆಂಗಳೂರು, ಜುಲೈ 19:

ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಬರ ಪರಿಸ್ಥಿತಿ: ನಮಗೆ, ನಿಮಗೆ ಭಾನುವಾರ, ರಜೆ ಎಂಬುದಿಲ್ಲ

ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಭಾನುವಾರ ಎಂಬುದು ಇಲ್ಲ. 24 ಗಂಟೆಗಳ ಕಾಲವೂ ಕೆಲಸ ಮಾಡಬೇಕು. ಹಾಗಾಗಿ ಬರಗಾಲಕ್ಕೆ ಸಿದ್ಧತೆ ಕೈಗೊಳ್ಳುವ ಬಗ್ಗೆ ಡಿಸಿ, ಸಿಇಓಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕುಡಿಯುವ ನೀರು: ಪ್ರತಿ ತಾಲ್ಲೂಕಿಗೆ ಒಂದು ಕೋಟಿ ರೂ

ಈಗಾಗಲೇ ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಒಂದು ಕೋಟಿ ರೂ.ಗಳ ಅನುದಾನ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದೂ ಅವರು ತಿಳಿಸಿದರು.

Share This Article
Leave a Comment