ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಫೆಬ್ರವರಿ – 21:
ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು.

ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸಂದೇಶಗಳುಳ್ಳ ಸಿನಿಮಾಗಳು ವಿರಳ
ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು.

ರಂಗಭೂಮಿ ಹಿನ್ನೆಲೆಯ ಕಲಾವಿದರು ಹೆಚ್ಚು ಪಳಗಿರುತ್ತಾರಲ್ಲದೆ ಜನಪ್ರಿಯರೂ ಆಗಿರುತ್ತಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ಕಲಾವಿದೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಹಿರಿಯ ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಟ, ನಿರ್ದೇಶಕ ಟಿ. ಎಸ್ ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಮೊದಲಾದವರು ಉಪಸ್ಥಿತರಿದ್ದರು.

Share This Article
Leave a Comment