ಪಬ್ಲಿಕ್ ಅಲರ್ಟ್ ನ್ಯೂಸ್ :-ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ*
ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆ
ಮೈಸೂರು,ಜ.8 (ಕರ್ನಾಟಕ ವಾರ್ತೆ):-
ಜಿಲ್ಲಾಡಳಿತದ ವತಿಯಿಂದ ಜನವರಿ 26 ರಂದು ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ: ಪಿ. ಶಿವರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವವನ್ನು ಬನ್ನಿಮಂಟಪದ ಪಂಜಿನ ಕವಾಯತ್ತು ಮೈದಾನದಲ್ಲಿ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು ಎಂದರು.
ಪಥ ಸಂಚಲನ ಪಥಸಂಚಲನ ಶಿಸ್ತುಬದ್ಧವಾಗಿ ಉತ್ತಮ ರೀತಿಯಲ್ಲಿ ಬರುವಂತೆ ಪೂರ್ವಭ್ಯಾಸ ಮಾಡಿಸಿ. ಪಥ ಸಂಚಲನದಲ್ಲಿ ಭಾಗವಹಿಸಲು ಹೊಸ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ಆಕರ್ಷಿತವಾಗಿರಲಿ ಎಂದರು.
ವಿವಿಧ ಸಮಿತಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವಾಗತ, ಸಾಂಸ್ಕೃತಿಕ, ಸಾರಿಗೆ, ಪೆರೇಡ್, ಸ್ವಚ್ಚತೆ, ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಿದರು.
ಪ್ಲಾಸ್ಟಿಕ್ ಧ್ವಜ ನಿಷೇಧ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಕಂಡುಬಂದಲ್ಲಿ ವಶಪಡಿಸಿಕೊಂಡು ಮಾರಾಟಗಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಹಾಜರಾತಿ ಕಡ್ಡಾಯ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಿ ಕಡ್ಡಾಯವಾಗಿ ಬನ್ನಿಮಂಟಪದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅವರು ಭಾಗವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹಾಜರಾತಿ ಪಡೆದು ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಹ್ವಾನ ಪತ್ರಿಕೆ ಮುದ್ರಿಸಿ ಶಿಷ್ಠಾಚಾರದಂತೆ ಹಂಚಿಕೆ ಮಾಡುವುದು ಹಾಗೂ ಮೈದಾನದಲ್ಲಿ ಸ್ವಚ್ಛತೆ ಕಪಾಡುವ ಕೆಲಸ ನಿರ್ವಹಿಸಬೇಕು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರು ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಡಿ.ವೈ. ಎಸ್. ಪಿ. ಹೆಚ್. ಪಿ ವೀರಣ್ಣ,, ಕೆ ಐ. ಎ. ಡಿ. ಬಿ ಕಾರ್ಯ ಪಾಲಕ ಅಭಿಯಂತರ ಹೆಚ್ ಕೆ ಮಾದೇಶ್, ಜಂಟಿ ಕೃಷಿ ನಿರ್ದೇಶಕ ರವಿ, ಡಿ. ಎ. ಆರ್ ಎಸಿಪಿ ಕುಮಾರಸ್ವಾಮಿ, ಡಿ ಡಿ ಪಿ ಐ ಕಚೇರಿಯ ಬಿ. ಎ. ಸೋಮಶೇಖರ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ವಿಭಾಗದ ತಹಶೀಲ್ದಾರ್ ಶಿವಪ್ರಸಾದ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
