ಅಧಿಕೃತ ಆ್ಯಪ್ ಸ್ಟೋರ್‌ಗಳಿಂದ ಮಾತ್ರ ಆ್ಯಪ್‌ಗಳನ್ನು ಡೌನ್ಲೋಡ್ ಮಾಡಿಕೊಳ್ಳಿ: ಕ್ರೈಂ ಇನ್ಸ್ಪೆಕ್ಟರ್ ನಂದೀಶ್ ಕುಮಾರ್

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಅಧಿಕೃತ ಆ್ಯಪ್ ಸ್ಟೋರ್‌ಗಳಿಂದ ಮಾತ್ರ ಆ್ಯಪ್‌ಗಳನ್ನು ಡೌನ್ಲೋಡ್ ಮಾಡಿಕೊಳ್ಳಿ: ಕ್ರೈಂ ಇನ್ಸ್ಪೆಕ್ಟರ್ ನಂದೀಶ್ ಕುಮಾರ್

ಮೈಸೂರು,ಫೆ.10 (ಕರ್ನಾಟಕ ವಾರ್ತೆ):-
ಕೃತಕ ಬುದ್ಧಿಮತ್ತೆ ಜೀವನವನ್ನು ಹೆಚ್ಚು ಚತುರ, ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿಯಾಗಿಸುವ ಯುಗದಲ್ಲಿ ನಾವಿದ್ದೇವೆ. ಅದು ಮೋಸವನ್ನೂ ಹಿಂದಿನಿಗಿಂತ ಹೆಚ್ಚು ನಂಬಿಕೆ ಮೂಡಿಸುವಂತೆ ಮಾಡಬಹುದು ಎಂದು ಸೈಬರ್ ಕ್ರೈಂ ಇನ್ಸ್ಪೆಕ್ಟರ್ ನಂದೀಶ್ ಕುಮಾರ್ ಅವರು ಹೇಳಿದರು.

ಇಂದು ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಇಂಟರ್ನೆಟ್ ದಿನ ಸ್ಮಾರ್ಟ್ ತಂತ್ರಜ್ಞಾನ, ಸುರಕ್ಷಿತ ಆಯ್ಕೆಗಳು, Al ನ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯನ್ನು ಅನ್ವೇಷಿಸುವುದರ ಕುರಿತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೈಬರ್ ಕ್ರೈಂ ಇನ್ಸ್ಪೆಕ್ಟರ್ ನಂದೀಶ್ ಕುಮಾರ್ ಅವರು ಮಾತನಾಡಿ ಇನ್ಸ್ಟಾಗ್ರಾಮ್, ಫೇಸ್ ಬುಕ್ ಅಂತಹ ಸೋಶಿಯಲ್ ಮೀಡಿಯಾ ಫ್ಲಾಟರ್ಮ್ಸ್ನಲ್ಲಿ ಕೂಡ ಅತಿ ಹೆಚ್ಚು ಜನರು ಮೋಸ ಹೋಗುತ್ತಿದ್ದಾರೆ.ಆದರಿಂದ ಜನರಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಸೈಬರ್ ಕ್ರೈಂ ಬಗ್ಗೆ ಶಾಲಾ ಮಟ್ಟದಿಂದಲೂ ಸೋಶಿಲ್ ಮೀಡಿಯಾ ಎಐನ ಬಗ್ಗೆ ಮಾಹಿತಿಯನ್ನು ತಿಳಿಸಬೇಕು ಎಂದು ಅಭಿಪ್ರಾಯ ಪಟ್ಟರು.

ಸೋಶಿಲ್ ಮೀಡಿಯಾ ಫ್ಲಾಟರ್ಮ್ಸ್ನಲ್ಲಿ ಪರ್ಸನಲ್ ವಿಷಯಗಳನ್ನು ಹಂಚಿಕೊಳ್ಳಬಾರದು, ಎಐ ನಿಂದ ಇನ್ಸ್ಟಾಗ್ರಾಮ್ ನಲ್ಲಿ ಬರುವ ರೀಲ್ಸ್ ಗಳ ಮೂಲಕ ಲಿಂಕ್ ಗಳನ್ನು ಅತಿ ಹೆಚ್ಚು ಫಾರ್ ವರ್ಡ್ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಜಾಸ್ತಿ ಆಗುತ್ತಿದೆ ಎಂದು ಹೇಳಿದರು.

ಪ್ಲೇಯಸ್ಟೋರ್ ಮತ್ತು ಆಪ್ ಲ್ ಸ್ಟೋರ್ ಮೂಲಕ ಆಪ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಬೇರೆ ಇನ್ಯಾವುದೇ ಅಪ್ಲಿಕೇಶನ್ ಗಳಲ್ಲಿ ಅಪ್ ಡೌನ್ಲೋಡ್ ಮಾಡಬಾರದು ಎಂದು ತಿಳಿಸಿದರು.ದೇಶದಲ್ಲಿ ಕಡಿಮೆ ಸೈಬರ್ ಕ್ರೈಂ ಅಪರಾಧದಲ್ಲಿ ತಮಿಳುನಾಡು 1ಸ್ಥಾನದಲ್ಲಿದೆ ಕರ್ನಾಟಕ 5 ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ 48 ಕೋಟಿ ವಂಚನೆಯಾಗಿದೆ, ಆದರಿಂದ ಯಾವುದೇ OTP ಅಥವಾ ರಹಸ್ಯ ಮಾಹಿತಿಯನ್ನು ಎಂದಿಗೂ ಹಂಚಿಕೊಳ್ಳಬಾರದು.ಆನ್‌ಲೈನ್‌ನಲ್ಲಿ ಅತಿಯಾದ ಹಂಚಿಕೆಯನ್ನು ತಪ್ಪಿಸುವುದು,ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಗೌಪ್ಯತಾ ಸೆಟ್ಟಿಂಗ್ಗಳನ್ನು ಬಳಸಬೇಕು ಎಂದು ಸೂಚನೆ ನೀಡಿದರು.

ಸಹಾಯಕ ಪ್ರಧ್ಯಾಪಕಿ ಶಿಲ್ಪಾ ಅವರು ಮಾತನಾಡಿ ಇಂಟರ್ನೆಟ್ ಮತ್ತು ಅದರ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಬಳಕೆದಾರರನ್ನು ಜಾಗೃತಗೊಳಿಸಬೇಕು ಎಂದರು.

ಸೈಬರ್ ನೈರ್ಮಲ್ಯಕ್ಕಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸಿ ಪ್ರಮುಖ ಸೈಬರ್ ಬೆದರಿಕೆಗಳು ಮತ್ತು ತಗ್ಗಿಸುವಿಕೆ ತಂತ್ರಗಳ ಬಗ್ಗೆ ಬಳಕೆದಾರರಿಗೆ ಶಿಕ್ಷಣ ನೀಡಬೇಕು ಎಂದು ತಿಳಿದರು.

ಪ್ರಮುಖ ಕೈಗಾರಿಕಾ ಸಂಶೋಧನಾ ಸಂಸ್ಥೆಯ ಅಧ್ಯಯನದ ಪ್ರಕಾರ, ಎಲ್ಲಾ ಸೈಬರ್ ದಾಳಿಗಳಲ್ಲಿ 90% ಮಾನವ ನಿರ್ಲಕ್ಷ್ಯದಿಂದಲೇ ಉಂಟಾಗುತ್ತವೆ ಎಂದರು.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಫೆಬ್ರವರಿ 10, 2026 ರಂದು ಐಎಸ್‌ಇಎ ಯೋಜನೆಯಡಿಯಲ್ಲಿ ಎನ್‌ಐಸಿ ಮತ್ತು ರಾಷ್ಟ್ರವ್ಯಾಪ್ತಿ ಇತರ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಆಚರಿಸುತ್ತಿದೆ ಎಂದು ಹೇಳಿದರು.

ಇಂದು ಕಾರ್ಯಕ್ರಮದಲ್ಲಿ ಆಡಳಿತ ಉಪಕಾರ್ಯದರ್ಶಿಗಳಾದ ಸವಿತ ಬಿ. ಎಂ, ಅಭಿವೃದ್ಧಿ ಉಪಕಾರ್ಯದರ್ಶಿಗಳಾದ ಭೀಮಪ್ಪ, ಮುಖ್ಯ ಯೋಜನಾ ಅಧಿಕಾರಿ ಪ್ರಭುಸ್ವಾಮಿ ಕೆ.ಬಿ, ಮುಖ್ಯ ಲೆಕ್ಕಧಿಕಾರಿ ಸಿದ್ದಗಂಗಮ್ಮ, ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಮಹೇಶ್, ಕುಮಾರ್, ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment