ಪಬ್ಲಿಕ್ ಅಲರ್ಟ್ ನ್ಯೂಸ್:-ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು : ಡಾ.ಪಿ.ಶಿವರಾಜು
ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರಾಗವಾಗಿ ನಡೆಸುವಂತೆ ಮಾಡಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ವಿದ್ಯಾರ್ಥಿ ಸ್ನೇಹಿ ಪೂರಕ ವಾತಾವರಣ ನಿರ್ಮಿಸಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ರವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆ ವಹಿಸಿ ಮಾತನಾಡಿದರು.
ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತಂದುಕೊಡುವಂತೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಎಸ್.ಪಿ., ಡಿಡಿಪಿಯು, ತಹಶೀಲ್ದಾರರುಗಳು, ಪ್ರಿನ್ಸಿಪಾಲರುಗಳು ಹಾಗೂ ಸಂಬಂಧಿಸಿದ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
