ಪಬ್ಲಿಕ್ ಅಲರ್ಟ್ ನ್ಯೂಸ್:-ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 12,764 ಪ್ರಕರಣ ಇತ್ಯರ್ಥ
ಮೈಸೂರು, ಮಾ.16(ಕರ್ನಾಟಕ ವಾರ್ತೆ):-
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಮಾಚ್೯ 14 ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,31,411 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 65,475 ಸಿವಿಲ್ ಪ್ರಕರಣಗಳು ಹಾಗೂ 65,936 ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ 44,746 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 22,064 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 12,764 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿರುತ್ತದೆ.
.
ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 40 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿರುತ್ತಾರೆ. ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟಾರೆಯಾಗಿ 12,764 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿರುತ್ತದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು ರೂ.74,66,67,115/- ಮೊತ್ತಗಳು ಇತ್ಯರ್ಥವಾಗಿರುತ್ತದೆ.
ಈ ಯಶಸ್ಸಿಗೆ ಸಹಕರಿಸಿದ ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲಾ ವಕೀಲರುಗಳು ಹಾಗೂ ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಇನ್ನಿತರೆ ಎಲ್ಲಾ ಇಲಾಖೆಗಳು ಹಾಗೂ ಮಾಧ್ಯಮ ಮಿತ್ರರುಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ತಿ ಉಷಾರಾಣಿ ರವರು ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ
ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್‌ನಾಥ್ ಕೆ.ಕೆ., ಮೈಸೂರು ವಕೀಲರ ಸಂಘದ ಅಧ್ಯಕ್ಷ.ಎಸ್.ಲೋಕೇಶ್ ಮತ್ತು ಕಾರ್ಯದರ್ಶಿ.ಎ.ಜಿ.ಸುಧೀರ್ ಹಾಗೂ ಎಲ್ಲಾ ಮೈಸೂರು ನಗರದ ನ್ಯಾಯಾಲಯಗಳ ನ್ಯಾಯಾಧೀಶರು ಹಾಜರಿದ್ದರು.
