ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಬೇಕು : ಅರುಣ್ ಕುಮಾರ್

latha prabhukumar
2 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಬೇಕು : ಅರುಣ್ ಕುಮಾರ್

ಮೈಸೂರು ಜನವರಿ 17 (ಕರ್ನಾಟಕ ವಾರ್ತೆ) ಸರ್ಕಾರವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಕಳೆದ ಎರಡೂವರೆ ವರ್ಷದಿಂದ ಫಲಾನುಭವಿಗಳಿಗೆ ತಲುಪುತ್ತಿದ್ದು, ಪಾರದರ್ಶಕವಾಗಿ ಅರ್ಹರಿಗೆ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಡಿ ದೇವರಾಜು ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಧಿಕಾರ ಸ್ಥಾಪನೆ ಆದ ನಂತರದಿಂದ ಇದುವರೆಗೂ 9 ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದಿದ್ದು, ಪಾರದರ್ಶಕವಾಗಿ ಫೈನುಭವಿಗಳಿಗೆ ತಲುಪುತ್ತಿವೆ.

ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಉಪಾಧ್ಯಕ್ಷರಾದ ಪ್ರೋ ಶಿವಕುಮಾರ್ ಅವರು ಮಾತನಾಡಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ತರಬೇತಿ ನೀಡಿ ಅವರಿಗೆ ಅವರು ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆದುಕೊಳ್ಳುವಂತೆ ತರಬೇತಿಗೊಳಿಸಬೇಕು.

ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಯುವನಿಧಿ ಯೋಜನೆಗೆ ಪದವಿ 14913 ಮತ್ತು ಡಿಪ್ಲೊಮೊ 204 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15117 ಅಭ್ಯರ್ಥಿಗಳು ಇದುವರೆಗೂ ನೋಂದಣಿ ಆಗಿದ್ದಾರೆ. ನವೆಂಬರ್ 2024 ರವೆರೆಗೂ ಡಿಬಿಟಿ ಆಗಿದೆ. ಇದುವರೆಗೂ 24 ಕಂತುಗಳ ಹಣ ಪಾವತಿ ಆಗಿದೆ.

ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 696080 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ 672538 ಫಲಾನುಭವಿಗಳಿಗೆ ಪಾವತಿಯಾಗಿದ್ದು ಶೇಕಡಾ 97 ರಷ್ಟು ಸಾಧನೆ ಆಗಿದೆ.

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಹರಿರುವ ಗ್ರಾಹಕರ ಸಂಖ್ಯೆ 967567 ಇದ್ದು ಇದರಲ್ಲಿ 963342 ಫಲಾನುಭವಿಗಳು ನೋಂದಣಿಯಾಗಿದ್ದು, ಸೌಲಭ್ಯವನ್ನು ಪಡೆಯುತ್ತಿದ್ದಾರೆ. ನೋಂದಣಿಗೆ 4225 ಫಲಾನುಭವಿಗಳು ಬಾಕಿ ಇದೆ.

ಅನ್ನ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 814836 ಪಡಿತರ ಚೀಟಿಗಳು ಇದ್ದು, 22,21,714 ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ 58.38 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ್ದು ಇದರಲ್ಲಿ 39.92 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಶೇಕಡಾ 68.39 ರಷ್ಟು ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಯ ಪ್ರಯಾಣಿಕರಿಂದ 1022.72 ಕೋಟಿ ಸಾರಿಗೆ ಆದಾಯ ಬಂದಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಜಿಲ್ಲಾ ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಹುಣಸೂರು ಬಸವಣ್ಣ, ಸೇರದಂತೆ ತಾಲ್ಲೂಕು ಮಟ್ಟದ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment