ಜನಗಣತಿ–2027: ಏ.01 ರಿಂದ 15 ವರೆಗೆ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಜನಗಣತಿ–2027: ಏ.01 ರಿಂದ 15 ವರೆಗೆ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಮೈಸೂರು, ಮಾ. 31( ಕರ್ನಾಟಕ ವಾರ್ತೆ):
ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿಗೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಸ್ವಯಂ ಗಣತಿಗಾಗಿ ವೆಬ್ ಸೈಟ್ ವಿಳಾಸ www.se.census.gov.in ಬಳಸಿಕೊಂಡು ಲಾಗ್ ಇನ್ ಆಗಿ ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ‌.

ಸಾರ್ವಜನಿಕರು ಸ್ವಯಂ ಗಣತಿ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ SMS ಮತ್ತು ಈ ಮೇಲ್ ಪೊರ್ಟಲ್ ಗೆ ರೆಫರೆನ್ಸ್ ಐ.ಡಿ ಸ್ವೀಕೃತವಾಗುತ್ತದೆ.

ಗಣತಿದಾರರು ಮನೆಗೆ ಭೇಟಿ ನೀಡಿದಾಗ ರೆಫರೆನ್ಸ್ ಐ.ಡಿ ನೀಡುವ ಮೂಲಕ ಗಣತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುತ್ತದೆ. ಒಂದು ವೇಳೆ ರೆಫರೆನ್ಸ್ ಐ.ಡಿ ನೀಡದಿದ್ದಾರೆ ಗಣತಿದಾರರು ಮೊದಲಿನಿಂದಲೂ ಎಲ್ಲಾ ಪ್ರಶ್ನೆಗಳನ್ನು ಕೇಳಿ ಹೊಸದಾಗಿ ಗಣತಿ ಮಾಡಬೇಕಿರುತ್ತದೆ.

ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವುದರಿಂದ ಗಣತಿದಾರರು ಬಂದಾಗ ಆಗುವ ಸಮಯ ವ್ಯಯವನ್ನು ತಪ್ಪಿಸಬಹುದಾಗಿದೆ‌‌. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment