ಪಬ್ಲಿಕ್ ಅಲರ್ಟ್ ನ್ಯೂಸ್:-ಧರ್ಮಗುರುಗಳು ದಸರಾ ಉದ್ಘಾಟನೆಯಲ್ಲಿ ಭಾಗಿ: ಡಿಕೆ.ಶಿವಕುಮಾರ್
ಮೈಸೂರು, ಅ. 3.(ಕರ್ನಾಟಕ ವಾರ್ತೆ):-
ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಸಾರ್ವಜನಿಕರಿಗೆ ಮನದಟ್ಟುಗೊಳಿಸಲು ವಿವಿಧ ಜನಾಂಗದ 500 ಧರ್ಮಗುರುಗಳನ್ನು ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮೈಸೂರು ದಸರಾ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಕ್ರೈಸ್ತ, ಮುಸ್ಲಿಂ, ಹಿಂದೂ ಜೈನ್ ಸೇರಿದಂತೆ ವಿವಿಧ ವಿವಿಧ ಧರ್ಮ ಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಧರ್ಮಗುರುಗಳು ಕುಳಿತುಕೊಳ್ಳಲು ಪ್ರತ್ಯೇಕವಾಗಿ ಆಸನದ ವ್ಯವಸ್ಥೆ ಮಾಡಬೇಕು ಅವರನ್ನು ಗೌರವ ಪೂರ್ವಕವಾಗಿ ಜಿಲ್ಲಾಡಳಿತದಿಂದ ಆಹ್ವಾನಿಸಬೇಕು ಇವರುಗಳ ವಾಸ್ತವ್ಯಕ್ಕಾಗಿವ ಸುತ್ತೂರು ಮಠದಲ್ಲಿ ಮಾಡಲಾಗುವುದು ಎಂದು ತಿಳಿಸಿದರು.
ಭೂಸೇನೆ, ವಾಯುಸೇನೆ ಹಾಗೂ ನೌಕಾ ಸೇನೆ ಮೂರು ತಂಡಗಳು ದಸರಾ ಮೆರವಣಿಗೆಯಲ್ಲಿ ಭಾಗವಹಿಸಿ ಶಿಸ್ತು ಮತ್ತು ದೇಶಭಕ್ತಿಯನ್ನು ಸಾರ್ವಜನಿಕರಿಗೆ ಸಾರಲಿದೆ. ಇದಕ್ಕೆ ಬೇಕಿರುವ ಅಗತ್ಯವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ರ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಗಳಿಸಿರುವ ಕ್ರೀಡಾಪಟುಗಳನ್ನು ಕ್ರೀಡಾ ದಸರಾದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಹ್ವಾನಿಸುವಂತೆ ತಿಳಿಸಿದರು.
ಪ್ರತಿದಿನ ಇಬ್ಬರು ಸಚಿವರು ದಸರಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಿದ್ದು, ಪ್ರತಿ ದಿನ ಭಾಗವಹಿಸುವ ಸಚಿವರ ಪಟ್ಟಿಮಾಡಿ ಅವರನ್ನು ಆಹ್ವಾನಿಸಬೇಕು. ಎಲ್ಲಾ ಶಾಸಕರು ಹಾಗೂ ಸಚಿವರನ್ನು ಜಂಬೂ ಸವಾರಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಜಂಬೂಸವಾರಿ ಮೆರವಣಿಗೆಯಲ್ಲಿ 40 ರಿಂದ 50 ಚಲನಚಿತ್ರ ನಟ ನಟಿಯರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಹೆಸರು ಪಟ್ಟಿ ಮಾಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಅವರಿಗೆ ತಿಳಿಸಲಾಗಿದೆ. ಕ್ರೀಡಾಪಟುಗಳು ಸಹ ಮೆರವಣಿಗೆಯ ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ದೀಪಾಲಂಕಾರ ದೀಪ ವೈವಿಧ್ಯಮಯ 21 ದಿನಗಳ ನಡೆಯಲಿದೆ ಕಂಬಳವು ಸಂಪ್ರದಾಯ ದಂತೆ ನಡೆಯಬೇಕು. ಯುವ ದಸರಾ, ಕಂಬಳ ನಡೆಯುವ ಸ್ಥಳಗಳಲ್ಲಿ ಆಹಾರ ಮೇಳ ನಡೆಸುವಂತೆ ತಿಳಿಸಿದರು.
ಮೆರವಣಿಗೆಯಲ್ಲಿ ಭಾಗವಹಿಸುವ ಕಲಾ ಪ್ರಕಾರ ಪುನರಾವರ್ತನೆಯಾಗದಂತೆ ನೋಡಿಕೊಳ್ಳಿ. ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ಸಾಗಬೇಕು ಎಂದರು.
ಅಕ್ಟೋಬರ್ 5 ರೊಳಗೆ ಮೈಸೂರು ನಗರದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ತೆರವುಗೊಳಿಸಬೇಕು. ಫ್ಲೆಕ್ಸ್ ಮತ್ತು ಬ್ಯಾನರ್ ಮುಕ್ತ ದಸರಾ ಆಚರಿಸಬೇಕು.ದಸರಾ ಕಾರ್ಯಕ್ರಮ ಆಯೋಜಿಸಲು ರಚಿಸಲಾಗಿರುವ 18 ಉಪಸಮಿತಿಗಳು ತಮ್ಮ ಕಾರ್ಯಕ್ರಮದ ವಿವರದ ಪಟ್ಟಿಯನ್ನು ಸಚಿವರುಗಳಿಗೆ ಒದಗಿಸಿ ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ದಸರಾ ಕಾರ್ಯಕ್ರಮಗಳನ್ನು ಸಂಘಟಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಖಂಡ್ರೆ,ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ,ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್,ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ,ಕೃಷ್ಣರಾಜ ಕ್ಷೇತ್ರದ ವಿಧಾನ ಸಭೆಯ ಶಾಸಕರಾದ ಟಿ ಎಸ್ ಶ್ರೀವತ್ಸ, ಅರಣ್ಯ ವಸತಿ ವಿಹಾರಧಾಮಗಳ ಅಧ್ಯಕ್ಷರು ಹಾಗೂ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಕೆ.ಆರ್.ನಗರ ಶಾಸಕರಾದ ರವಿಶಂಕರ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ. ತಿಮ್ಮಯ್ಯ, ಡಾ. ಕೆ. ಶಿವಕುಮಾರ್,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಅಧ್ಯಕ್ಷ ಗಣೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸೇರಿದಂತೆ ದಸರಾ ವಿವಿಧ ಉಪಸಮಿತಿಗಳ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
