ಮೈಸೂರು ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲಿತಾಂಶ ಉತ್ತಮೀಕರಣಕ್ಕೆ ಎಲ್ಲಾ ಕಟ್ಟುನಿಟ್ಟಿನ ಕ್ರಮ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಮೈಸೂರು ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲಿತಾಂಶ ಉತ್ತಮೀಕರಣಕ್ಕೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಬಿಇಓರವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಇಂದು ಖಡಕ್ ಸೂಚನೆ ನೀಡಿದರು.

ಮೊದಲ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ 50% ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಹುಣಸೂರು, ಪಿರಿಯಾಪಟ್ಟಣ , ಹೆಚ್.ಡಿ ಕೋಟೆ, ನಂಜನಗೂಡು, ಮೈಸೂರು ದಕ್ಷಿಣ ತಾಲೂಕಿನ ಕೆಲವು ಶಾಲೆಗಳಿಗೆ ನೊಟೀಸ್ ನೀಡಿ, ನಿರಂತರವಾಗಿ ತಾಲೂಕಿನಲ್ಲೇ ತಂಡಗಳನ್ನು ರಚಿಸಿಕೊಂಡು ಆ ಶಾಲೆಗಳ ಫಲಿತಾಂಶ ವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಮೊದಲ ಮೂರು ಸ್ಥಾನದಲ್ಲಿ ಜಿಲ್ಲೆಯ SSLC, PUC ಫಲಿತಾಂಶ ಇರುವಂತೆ ಎಲ್ಲರೂ ಶ್ರಮಿಸಬೇಕೆಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚನೆ ನೀಡಿದರು.

ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳಲ್ಲಿ ಫಲಿತಾಂಶ ವಿಶ್ಲೇಷಿಸಿ, ವಿಷಯವಾರು ಹಿಮ್ಮಾಹಿತಿ ನೀಡುವಂತೆ ತಿಳಿಸಲಾಯಿತು. ಡಿಡಿಪಿಯು ಉಪನಿರ್ದೇಶಕರಿಂದ ಪಿಯುಸಿ ಫಲಿತಾಂಶ ವೃದ್ಧಿಗೆ ಕೈಗೊಂಡಿರುವ ಕ್ರಮಗಳನ್ನು ಅವಲೋಕಿಸಲಾಯಿತು.

ಮೈಸೂರು ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ನ ಡಿ.ದೇವರಾಜು ಅರಸು ಸಭಾಂಗಣದಲ್ಲಿ ಮೈಸೂರು ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಫಲಿತಾಂಶ ವಿಶ್ಲೇಷಣಾ ಸಭೆ ನಡೆಯಿತು. ಸಭೆಯಲ್ಲಿ ಉಪನಿರ್ದೇಶಕರು (ಆಡಳಿತ), ಡಯಟ್ ಪ್ರಾಂಶುಪಾಲರು ಮತ್ತು ಬಿಇಓ ರವರು, ಹಿರಿಯ ಉಪನ್ಯಾಸಕರು, ಪಿಯು ಕಾಲೇಜಿನ ನೋಡಲ್ ಪ್ರಾಂಶುಪಾಲರು, ಬಿ.ಆರ್.ಸಿ ರವರು, ಸಹಾಯಕ ನಿರ್ದೇಶಕರು, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕರು, ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a Comment