ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ

latha prabhukumar
1 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಏಪ್ರಿಲ್ -18:
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು.

ಕೆ. ಎನ್.ರಾಜಣ್ಣ ಅವರೊಂದಿಗೆ ಮಾತನಾಡಿದ್ದೇನೆ
ಮಾಜಿ ಸಚಿವ ಕೆ. ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜಣ್ಣ ಅವರೊಂದಿಗೆ ಮಾತನಾಡಲಾಗಿದೆ ಎಂದರು.

Share This Article
Leave a Comment