ಅ.೨೫ಕ್ಕೆ ರಿಪಬ್ಲಿಕನ್‌ ಪಾರ್ಟಿ ಪದಗ್ರಹಣ 

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನೂತನ ಜಿಲ್ಲಾಧ್ಯಕ್ಷರ ಘೋಷಣೆ, ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಅ. ೨೫ ರಂದು ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಆರ್‌ಪಿಐ ಸತೀಶ್ ಹಾಸನ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಅಂದು ಬೆಳಗ್ಗೆ ೧೧ಕ್ಕೆ ನಗರದ ಎಫ್‌ಟಿಎಸ್ ವೃತ್ತದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯೊಡನೆ ಜಗನ್ಮೋಹನ ಅರಮನೆ ತಲುಪಿದ ಬಳಿಕ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಪದಾಧಿಕಾರಿಗಳನ್ನು ರಾಜ್ಯ ಕಾರ್ಯಾಧ್ಯಕ್ಷ ಡಾ.ಜಿ. ಗೋವಿಂದಯ್ಯ ಘೋಷಣೆ ಮಾಡಲಿದ್ದಾರೆ. ಪಕ್ಷದ ರಾಜ್ಯದ ಎಲ್ಲ ನಾಯಕರು, ಯುವ ಘಟಕ, ಮಹಿಳಾ ಘಟಕದ ಮುಖಂಡರು ಆಗಮಿಸುತ್ತಿದ್ದಾರೆ. ಸುಮಾರು ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ ಎಂದರು.
ನಗರದಲ್ಲಿಯೂ ಪಕ್ಷ ಅಸ್ತಿತ್ವದಲ್ಲಿದ್ದು, ರಾಜ್ಯದಲ್ಲಿ ಇನ್ನಷ್ಟು ಬಲಾಢ್ಯಗೊಳಿಸುವ ಯತ್ನ ನಡೆದಿದೆ. ಈ ಮೂಲಕ ಮುಂದಿನ ವಿಧಾನಸಭಾ, ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲು ಶ್ರಮಿಸಲಾಗುವುದೆಂದರು. ಮತ್ತೋರ್ವ ಪದಾಧಿಕಾರಿ ಜಿ.ಸಿ. ವೆಂಕಟರಮಣಪ್ಪ ಮಾತನಾಡಿ, ಇದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸ್ಥಾಪಸಿದ ಪಕ್ಷವಾಗಿದೆ. ತೆಲಂಗಾಣ, ಆಂಧ್ರ, ಕೇರಳ, ತಮಿಳುನಾಡುಗಳಿಂದಲೂ ಪಕ್ಷದ ಮುಖಂಡರು ಆಗಮಿಸಿ, ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದರು. ಅಭಿಷೇಕ್, ಸುರೇಶ್, ರವಿಕುಮಾರ್, ಕಿರಣ್ ಹಾಗೂ ಇನ್ನಿತರರು ಇದ್ದರು.

Share This Article
Leave a Comment