ಪಬ್ಲಿಕ್ ಅಲರ್ಟ್
ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಶೀರ್ಷಿಕೆಯಡಿ “ನಮ್ಮ ಮೈಸೂರು ಬೈಕರ್ಸ್ ಕಮ್ಯುನಿಟಿ” ರವರ ವತಿಯಿಂದ ಸೈಕಲ್ ರ್ಯಾಲಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಯಿಂದ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಇನ್ನಿತರರು ಉಪಸ್ಥಿತರಿದ್ದರು.


