ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ

Pratheek
2 Min Read


ಮೈಸೂರು: ನಗರದ ಗಾಂಧಿ ವೃತ್ತದಲ್ಲಿ ಮತಗಳ್ಳತನ ಖಂಡಿಸಿ ಶನಿವಾರ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್‌ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಯಿತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯ್ಧ್ಯಕ್ಷ ವಿ.ಎಸ್‌.ಉಗ್ರಪ್ಪ ಮಾತನಾಡಿ ಇಂದು ದೇಶದಲ್ಲಿ ಸರ್ವಾಧಿಕಾರಿ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಜನರ ವಿಶ್ವಾಸ ಗಳಿಸುವಲ್ಲಿ ವಿಫಲರಾಗಿದ್ದಾರೆ. ಅಧಿಕಾರಕ್ಕೆ ಬರುವಾಗ ಪ್ರಮುಖವಾಗಿ ಮೂರು ಆಸ್ವಾಸನೆ ನೀಡಿದ್ದ ಅವರು ಒಂದನ್ನೂ ಸಹ ಈಡೇರಿಸುತ್ತಿಲ್ಲ ಎಂದು ತಿಳಿಸಿದರು.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ 11 ವರ್ದಿಂದ ಅಧಿಕಾರದಲ್ಲಿದ್ದರೂ ಸಹ ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ಇಳಿದಿಲ್ಲ. ಚಿನ್ನ, ಬೆಳ್ಳಿದರ ನೋಡಿದರೆ ಬಡವರು ಖರೀದಿಸಲು ಆಗುವುದಿಲ್ಲ. ಇದೆನಾ ಅಚ್ಚೆ ದಿನಾ ಎಂದು ಪ್ರಶ್ನಿಸಿದರು. ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದವರು 15 ಪೈಸೆಯೂ ಹಾಕಲಿಲ್ಲ ಎಂದು ಹೇಳಿದರು.
ನಗರ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ ಮಾತನಾಡಿ, ರಾಹುಲ್‌ ಗಾಂದಿ ಅವರು ಸಾಕ್ಷಿ ಸಮೇತ ಜನರಿಗೆ ತೋರಿಸಿದ್ದರೂ ಸಹ ಅಸನ್ನು ಬಿಜೆಪಿಗರು ಅಲ್ಲಗೆಳೆಯುತ್ತಿದ್ದಾರೆ. ವೋಟ್‌ ಕಳ್ಳತನ ಮಾಡುವ ಮೂಲಕ ಕಾಂಗ್ರೆಸ್‌ ಗೆಲುವಿಗೆ ಅಡಚಣೆ ಉಂಟು ಮಾಡುತ್ತಿದ್ದಾರೆ. ದೇಶದ ಯಾವುದೇ ಚುನಾವಣೆ ಮಾಡಿದರೂ ಸಹ ಇಂತಹ ವ್ಯತ್ಯಾಸ ಕಾಣುತ್ತಿದ್ದೇವೆ. ಸಚಿವ ಪ್ರಿಯಾಂಕ ಖರ್ಗೆ ಅವರು ಹೇಳಿರುವ ಸತ್ಯಕ್ಕೆ ಅವರಿಗೆ ಕೊಲೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ತಿಳಿಸಿರು.
ಗ್ರಾಮಾಂತರ  ಜಿಲ್ಲಾ  ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ ಮಾತನಾಡಿ, ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸತ್ಯ ಹೇಳಿದರೆ ಅವರಿಗೆ  ಕೊಲೆ ಬೆದರಿಕೆ ಹಾಕಲಾಗುತ್ತಿದೆ.  ಇಲ್ಲಿ  ಸಹಿ ಸಂಗ್ರಹಿಸಿ ರಾಷ್ಟ್ರಪತಿಗೆ ಕಳಿಸಿಕೊಡುತ್ತೇವೆ ಎಂದು ತಿಳಿಸಿದರು. ವಿಧಾನಪರಿತ್‌ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ, ಮಾಜಿ ಮೇಯರ್‌ ಪುಷ್ಪಲತಾ ಚಿಕ್ಕಣ್ಣ, ಟಿ.ಬಿ.ಚಿಕ್ಕಣ್ಣ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾಸಿದ್ದಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ನಂಜುಂಡಸ್ವಾಮಿ,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್‌,ನಗರಪಾಲಿಕೆ ಮಾಜಿ ಸದಸ್ಯ ಪ್ರದೀಪ್‌,  ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್‌, ಮಾಧ್ಯಮ ವಕ್ತಾರ ಎಂ.ಮಹೇಶ್‌, ಜಿಲ್ಲಾ ಕಾಂಗ್ರೆಸ್‌ ಸಂಶೋದನಾ ವಿಭಾಗದ ಅಧ್ಯಕ್ಷ ಎಂ.ನಾಗರಾಜು, ಸಂವಿಧಾನ ಸಂರಕ್ಷಣಾ ಸಮಿತಿಯ ರಾಜಾಧ್ಯಕ್ಷ ಎನ್‌.ಭಾಸ್ಕರ್‌, ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಇನ್ನಿತರರು ಉಪಸ್ಥಿತರಿದ್ದರು.

ಬಾಕ್ಸ್‌
ಬಿಜೆಪಿ ಪಕ್ಷವೂ ಜನಮತದ ಮೂಲಕ ಗೆಲುವುದು ಸಾಧಿಸಲಾಗದೇ ಈ ರೀತಿ ಮತಗಳವಿನ ಮೂಲಕ ರಾಜ್ಯ ಹಾಗೂ ದೇಶದಲ್ಲಿ ಬರುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ ಕೇಂದ್ರದ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು. ಕೇಂದ್ರ ಚುನಾವಣಾ ಆಯೋಗವು ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಎಲ್ಲೆಡೆ ಅಭಿಯಾನ ನಡೆಸಲಾಗುವುದು.
– ಅರುಣ್‌ಕುಮಾರ್‌, ಅಧ್ಯಕ್ಷ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ

Share This Article
Leave a Comment